ಕಾಸರಗೋಡು: ರಸ್ತೆ ಅಪಘಾತಗಳನ್ನು ತಪ್ಪಿಸಲು ಮತ್ತು ಸುಗಮ ಸಂಚಾರ ಖಚಿತಪಡಿಸಿಕೊಳ್ಳಲು ಕಾಸರಗೋಡು ಜಿಲ್ಲೆಯಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ, ಆರ್‍ಟಿಒ ನೇತೃತ್ವದಲ್ಲಿ ಜಂಟಿ ತಪಾಸಣೆ ನಡೆಸಲು ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಶಾಸಕ ಇ. ಚಂದ್ರಶೇಖರನ್ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳ ಬಗ್ಗೆ ಕಳವಳವ್ಯಕ್ತಪಡಿಸಿ, ಅಪಘಾತ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ಅಧಿಖಾರಿಗಳಲ್ಲಿ ಮಾಹಿತಿ ಪಡೆದುಕೊಂಡರು. ಅಪರ ಜಿಲ್ಲಾಧಿಕಾರಿ ಪ್ರತೀಕ್ ಜೈನ್ ಅವರು ಕ್ರಮಗಳ ಕುರಿತು ವಿವರಿಸಿದರು.
ವೆಳ್ಳರಿಕುಂಡ್ ತಾಲೂಕು ಆಸ್ಪತ್ರೆಯಲ್ಲಿ ಜನವರಿ ಎರಡನೇ ವಾರದಿಂದ ಡಯಾಲಿಸಿಸ್ ಕೇಂದ್ರ ಆರಂಭವಾಗಲಿದೆ. ಜತೆಗೆ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಗುವಿಗೆ ಪ್ರಾರಂಭಿಸಲು ಸಾಧ್ಯವಾಗಲಿದೆ. ಸಾಕಷ್ಟು ನೌಕರರಿಲ್ಲದ ಕಾರಣ ಹುದ್ದೆ ಸೃಷ್ಟಿಸಲು ಆರೋಗ್ಯ ಇಲಾಖೆ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಆರೋಗ್ಯ ಮಾಹಿತಿ ನೀಡಿದರು.
ಕುಟ್ಟಿಕೋಲ್ 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ಶೇ 80ರಷ್ಟು ಪೂರ್ಣಗೊಂಡಿದೆ. ಕುಟ್ಟಿಕೋಲ್ 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ಪ್ರಗತಿ ಬಗ್ಗೆ ಕೆಎಸ್‍ಇಬಿ ಉಪ ಮುಖ್ಯ ಎಂಜಿನಿಯರ್ ಶಾಸಕ ಸಿ.ಎಚ್.ಕುಂಜಂಬು ಅವರಿಗೆ ಮಾಹಿತಿ ನೀಡಿದರು. ಟಾಟಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕಾಮಗಾರಿ ಬಗ್ಗೆ ಶಾಸಕರು ಪರಿಶೀಲಿಸಿದರು. ಕಂಟೈನರ್ ಗಳನ್ನು ಅಗತ್ಯವಿರುವ ಇಲಾಖೆಗಳಿಗೆ ನೀಡಿ ಆದಷ್ಟು ಬೇಗ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣವಾಗುತ್ತಿರುವ ಕೆಳಸೇತುವೆಗಳ ಅಗಲ ಹಾಗೂ ವಾಹನಗಳು ಸಂಚರಿಸುವ ರೀತಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು.
ಜಿಲ್ಲಾಧಿಕಾರಿ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಎಡಿಎಂ ಪಿ.ಅಖಿಲ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ರಾಜಗೋಪಾಲನ್, ಇ. ಚಂದ್ರಶೇಖರನ್, ವಕೀಲ ಸಿ.ಎಚ್.ಕುಂಜಂಬು, ಎನ್.ಎ.ನೆಲ್ಲಿಕುನ್ನು, ಎ.ಕೆ.ಎಂ ಅಶ್ರಫ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ. ಬೇಬಿ ಬಾಲಕೃಷ್ಣನ್, ನೀಲೇಶ್ವರಂ ನಗರಸಭೆ ಅಧ್ಯಕ್ಷೆ ಟಿ.ವಿ.ಶಾಂತಾ, ಕಾಞಂಗಾಡ್ ನಗರಸಭೆ ಉಪಾಧ್ಯಕ್ಷ ಬಿಲ್ಟೆಕ್ ಅಬ್ದುಲ್ಲಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಯೋಜನಾಧಿಕಾರಿ ಟಿ. ರಾಜೇಶ್ ಸ್ವಾಗತಿಸಿದರು.