ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸತತ ಮೂರು ದಿನಗಳಿಂದ ದಟ್ಟ ಮಂಜು ಆವರಿಸಿಕೊಂಡಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ.
ಭಾನುವಾರ ಬೆಳಿಗ್ಗೆಯೂ ಮಂಜು ಕವಿದ ವಾತಾವರಣವಿದ್ದ ಪರಿಣಾಮ 50 ಕ್ಕೂ ಹೆಚ್ಚು ರೈಲುಗಳು ತಡವಾಗಿ ಸಂಚರಿಸಿದವು.
ದೆಹಲಿಯ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆ ಮಟ್ಟದಲ್ಲಿದೆ, ಬೆಳಿಗ್ಗೆ 9 ಗಂಟೆಗೆ ವಾಯು ಗುಣಮಟ್ಟ ಸೂಚ್ಯಂಕ (AQI) 372 ಇತ್ತು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶ ತಿಳಿಸಿದೆ.
ಶನಿವಾರ ದಟ್ಟ ಮಂಜಿನ ಪರಿಣಾಮ 19 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿತ್ತು. ಅಲ್ಲದೆ 400 ವಿಮಾನಗಳ ಹಾರಾಟ ತಡವಾಗಿದೆ. ಪ್ರತಿಕೂಲ ಹವಾಮಾನದ ಪರಿಣಾಮ 45ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ.