ನವದೆಹಲಿ: ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಕೇರಳ ಮೂಲದವರು.
ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಈ ಶಿಫಾರಸನ್ನು ಮಾಡಿದೆ. ಕೇಂದ್ರ ಸರ್ಕಾರ ಈ ಶಿಫಾರಸನ್ನು ಅಂಗೀಕರಿಸಿದರೆ, ನ್ಯಾಯಮೂರ್ತಿ ವಿನೋದ್ ಚಂದ್ರನ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗುತ್ತದೆ.
ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನು ನವೆಂಬರ್ 2011 ರಲ್ಲಿ ಕೇರಳ ಹೈಕೋರ್ಟ್‍ನ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು. ಅವರನ್ನು ಮಾರ್ಚ್ 2023 ರಲ್ಲಿ ಪಾಟ್ನಾ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಬಳಿಕ ವರ್ಗಾಯಿಸಲಾಗಿತ್ತು.