ಕಾಸರಗೋಡು: ಬೋವಿಕ್ಕಾನ ಪೊವ್ವಲ್‍ನಲ್ಲಿ ಕಾರ್ಯಾಚರಿಸುತ್ತಿರುವ ಕಾಸರಗೋಡು ಲಾಲ್‍ಬಹದ್ದೂರ್ ಶಾಸ್ತ್ರಿ(ಎಲ್‍ಬಿಎಸ್)ಇಂಜಿನಿಯರಿಂಗ್ ಕಾಲೇಜಿನಲ್ಲಿ ಅನ್ವಯಿಕ ವಿಜ್ಞಾನ ವಿಭಾಗದಲ್ಲಿ ಗಣಿತ ಮತ್ತು ರಸಾಯನಶಾಸ್ತ್ರ ವಿಷಯಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸಹಾಯಕ ಪ್ರಾಧ್ಯಾಪಕರ ನೇಮಕ ಮಾಡಲಾಗುವುದು.
ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅರ್ಹತೆಯಾಗಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಪ್ರಮಾಣಪತ್ರ ಮತ್ತು ಬಯೋಡಾಟ ಸಹಿತ ಜನವರಿ 15 ರಂದು ಬೆಳಗ್ಗೆ 10.30ಕ್ಕೆ ಕಾಲೇಜು ಕಚೇರಿಯಲ್ಲಿ ನಡೆಯುವ ಸಂದರ್ಶನ ಹಾಗೂ ಲಿಖಿತ ಪರೀಕ್ಷೆಗೆ ಹಾಜರಾಗಬೇಕು. ನೆಟ್/ಪಿ.ಎಚ್.ಡಿ ಅರ್ಹತೆಗೆ ಆದ್ಯತೆ ನೀಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ(7907417896, 974618690)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.