ನವದೆಹಲಿ: ದಟ್ಟ ಮಂಜು ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಇಂದು (ಭಾನುವಾರ) ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದ್ದು, 100ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬವಾಯಿತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇಂದಿರಾಗಾಂಧಿ ಅಂತರರಾಷ್ರೀಯ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ಕಡಿಮೆ ಗೋಚರತೆಯ ಪರಿಣಾಮ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಆದರೆ ಯಾವುದೇ ವಿಮಾನದ ಮಾರ್ಗ ಬದಲಾವಣೆ ಹಾಗೂ ಯಾವುದೇ ವಿಮಾನದ ಹಾರಾಟವನ್ನು ರದ್ದು ಪಡಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದೆಹಲಿ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಪೋಸ್ಟ್ ಹಂಚಿಕೊಂಡಿದೆ.
'ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ. ಪ್ರಯಾಣಿಕರು ಬದಲಾದ ವಿಮಾನಗಳ ಹಾರಾಟದ ಸಮಯವನ್ನು ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಿರಿ' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ.