ವಾಷಿಂಗ್ಟನ್: ಜನವರಿ 20ರೊಳಗೆ ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಭಯಾನಕ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದರು.
ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಎಚ್ಚರಿಕೆ ನೀಡಿದರು.
ಅಮೆರಿಕದ ಕೆಲ ಪ್ರಜೆಗಳನ್ನು ಹಮಾಸ್ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದು ಅವರ ಬಿಡುಗಡೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು 'ನಾವು ಅವರ ಬಿಡುಗಡೆಯ ಹತ್ತಿರದಲ್ಲಿ ಇದ್ದೇವೆ' ಎಂದರು.
ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲು, ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಮಧ್ಯಪ್ರಾಚ್ಯದಲ್ಲಿ ಭಯಾನಕ ಪರಿಸ್ಥಿತಿ ಉಂಟಾಗಲಿದೆ ಎಂದರು.
ವಿಶೇಷ ರಾಯಭಾರಿಯಾಗಿ ಸ್ಟೀವನ್ ಚಾರ್ಲ್ಸ್ ಅವರು ಮಧ್ಯಪ್ರಾಚ್ಯಕ್ಕೆ ತೆರಳಿ ಮಾತುಕತೆ ನಡೆಸಿದ ಬಳಿಕ ಟ್ರಂಪ್ ಅವರು ಈ ಹೇಳಿಕೆ ನೀಡಿದ್ದಾರೆ.
ನಾವು ಒತ್ತೆಯಾಳುಗಳನ್ನು ಕರೆತರುವಲ್ಲಿ ಯಶಸ್ವಿಯಾಗಲಿದ್ದೇವೆ, ಮಾತುಕತೆಗಳು ಪ್ರಗತಿಯಲ್ಲಿವೆ ಎಂದು ಸ್ಟೀವನ್ ಚಾರ್ಲ್ಸ್ ಈ ಹಿಂದೆ ಹೇಳಿದ್ದರು.
ಹಮಾಸ್ ಅಮೆರಿಕ ಪ್ರಜೆಗಳು ಸೇರಿದಂತೆ ಇಸ್ರೇಲ್‌ನ ನೂರಾರು ಪ್ರಜೆಗಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದೆ.