ಮಥುರಾ: ಭಕ್ತರು ದೇಣಿಗೆಯಾಗಿ ನೀಡಿದ್ದ ಲಕ್ಷಾಂತರ ಹಣ ಮತ್ತು ರಸೀದಿ ಪುಸ್ತಕದೊಂದಿಗೆ ಮಥುರಾದ ಇಸ್ಕಾನ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬರು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಘಟನೆಯ ಕುರಿತು ಶುಕ್ರವಾರ ತಡರಾತ್ರಿ ದೇವಸ್ಥಾನದ ಮುಖ್ಯ ಹಣಕಾಸು ಅಧಿಕಾರಿ ವಿಶ್ವ ನಾಮ ದಾಸ್ ಅವರು ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ತಿಳಿಸಿದ್ದಾರೆ.
ದಾಸ್ ಅವರು ಡಿ. 27 ರಂದು ಕಳ್ಳತನದ ಬಗ್ಗೆ ಮಾಹಿತಿ ನೀಡಿದ್ದು, ಪ್ರಾಥಮಿಕ ತನಿಖೆ ನಡೆಸಿ ಎಫ್‌ಐಆರ್ ದಾಖಲಿಸಲಾಗಿದೆ. ಹಣದ ಜತೆಗೆ 32 ಹಾಳೆಗಳಿದ್ದ ರಸೀದಿ ಪುಸ್ತಕದೊಂದಿಗೆ ಪರಾರಿಯಾಗಿದ್ದಾನೆ ತನಿಖೆಯ ಬಳಿಕ ಎಷ್ಟು ಹಣ ಕೊಂಡೊಯ್ದಿದ್ದಾರೆ ಎನ್ನುವುದು ತಿಳಿದುಬರಲಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.