ಅಹಮದಾಬಾದ್: ಗುಜರಾತ್ ನಲ್ಲಿ ನಡೆಯುತ್ತಿರುವ ಉತ್ತರಾಯಣ ಹಬ್ಬದ ವೇಳೆ ಗಾಳಿಪಟ ಹಾರಿಸುವಾಗ ಅದರ ದಾರದಿಂದ ಕುತ್ತಿಗೆ ಸೀಳಿ ನಾಲ್ಕು ವರ್ಷದ ಬಾಲಕ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ರಾಜ್‌ಕೋಟ್, ಪಂಚಮಹಲ್, ಮೆಹ್ಸಾನಾ ಮತ್ತು ಸುರೇಂದ್ರನಗರ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವಿನ ಪ್ರಕರಣ ವರದಿಯಾಗಿದ್ದು, ರಾಜ್ಯಾದ್ಯಂತ ಹಲವು ಮಂದಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಂಚಮಹಲ್ ಜಿಲ್ಲೆಯ ಹಲೋಲ್ ಪಟ್ಟಣದಲ್ಲಿ ಕುನಾಲ್ ಪರ್ಮಾರ್ ಎಂಬ ನಾಲ್ಕು ವರ್ಷದ ಬಾಲಕ ಗಾಳಿಪಟದ ದಾರದಿಂದ ಕುತ್ತಿಗೆ ಸೀಳಿ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ.
ಮೆಹ್ಸಾನಾ ಜಿಲ್ಲೆಯ ವಡ್ನಗರ ತಾಲೂಕಿನಲ್ಲಿ ಮಾನಸಾಜಿ ಠಾಕೋರ್ (35) ಎಂಬ ರೈತ ಬೈಕ್ ನಲ್ಲಿ ತನ್ನ ಜಮೀನಿಗೆ ಹೋಗುತ್ತಿದ್ದಾಗ ಗಾಳಿಪಟದ ದಾರ ಕುತ್ತಿಗೆ ಸೀಳಿದೆ. ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ಅಲ್ಲಿ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪಂಚಮಹಲ್ ಜಿಲ್ಲೆಯ ಹಲೋಲ್ ಪಟ್ಟಣದಲ್ಲಿ ಕುನಾಲ್ ಪರ್ಮಾರ್ ಎಂಬ ನಾಲ್ಕು ವರ್ಷದ ಬಾಲಕ ಗಾಳಿಪಟದ ದಾರದಿಂದ ಕುತ್ತಿಗೆ ಸೀಳಿ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ. ಮೆಹ್ಸಾನಾ ಜಿಲ್ಲೆಯ ವಡ್ನಗರ ತಾಲೂಕಿನಲ್ಲಿ ಮಾನಸಾಜಿ ಠಾಕೋರ್ (35) ಎಂಬ ರೈತ ಬೈಕ್ ನಲ್ಲಿ ತನ್ನ ಜಮೀನಿಗೆ ಹೋಗುತ್ತಿದ್ದಾಗ ಗಾಳಿಪಟದ ದಾರ ಕುತ್ತಿಗೆ ಸೀಳಿದೆ. ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ಅಲ್ಲಿ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಉತ್ತರಾಯಣದಲ್ಲಿ ತುರ್ತು ಪರಿಸ್ಥಿತಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು 108 ಆಂಬುಲೆನ್ಸ್ ಸೇವೆ ಒದಗಿಸುತ್ತಿರುವ ಜಿವಿಕೆ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.