ಬರೇಲಿ: ಫೇಸ್‌ಬುಕ್‌ನಲ್ಲಿಮಹಾ ಕುಂಭಮೇಳ, ಸನಾತನ ಧರ್ಮ ಮತ್ತು ರಾಮಮಂದಿರ ಕುರಿತು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು 30 ವರ್ಷದ ಮೈಜಾನ್ ರಜಾ ಎಂದು ಗುರುತಿಸಲಾಗಿದೆ.
ಆರೋಪಿಯು ತನ್ನ ಫೇಸ್‌ಬುಕ್ ಖಾತೆಯಲ್ಲಿ 'ಯಾರೇ ಬಂದರೂ ಮಹಾಕುಂಭ ಮೇಳ ನಡೆಯಲು ಬಿಡಬೇಡಿ' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದನು. ಹಾಗೆಯೇ ಸನಾತನ ಧರ್ಮ, ರಾಮಮಂದಿರ ಬಗ್ಗೆಯೂ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಕಾಮೆಂಟ್‌ಗಳನ್ನು ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಹಿಂದೂ ಸಂಘಟನೆಗಳ ಮುಖಂಡರು, ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತಹ ಪೋಸ್ಟ್‌ಗಳನ್ನು ಮಾಡುವುದು ಖಂಡನೀಯ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ಸಂಬಂಧ ಪ್ರೇಮನಗರ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಢಾಧಿಕಾರಿ ಮನುಷ್ ಪರೀಕ್ ತಿಳಿಸಿದ್ದಾರೆ.