ನವದೆಹಲಿ: ಮಾನವ ಕಳ್ಳಸಾಗಣೆ ಮತ್ತು ಡಿಜಿಟಲ್ ಅರೆಸ್ಟ್ ತನಿಖೆಯ ಭಾಗವಾಗಿ ದೆಹಲಿಯ ಜಾಮಿಯಾ ನಗರದಲ್ಲಿ ಇತ್ತೀಚೆಗೆ ಬಂಧಿಸಲಾದ ಆರೋಪಿಯ ಮನೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶೋಧ ನಡೆಸಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಶನಿವಾರ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಟ್ಯಾಬ್ಲೆಟ್‌ಗಳನ್ನು ವಶಪಡಿಸಿಕೊಳ್ಳಲಾಯಿತು.
ಡೆಬಿಟ್ ಕಾರ್ಡ್‌ಗಳು, ಪಾಸ್‌ಬುಕ್‌ಗಳು ಮತ್ತು ಹಲವು ಬ್ಯಾಂಕ್‌ಗಳ ಚೆಕ್‌ಬುಕ್ ಸೇರಿದಂತೆ ಹಣಕಾಸು ದಾಖಲೆಗಳನ್ನು ಪರಿಶೀಲನೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಕಮ್ರಾನ್ ಹೈದರ್ ಮತ್ತು ಇತರ ಆರೋಪಿಗಳು ಲಾವೋಸ್‌ನ ಗೋಲ್ಡನ್ ಟ್ರಯಾಂಗಲ್ ಪ್ರದೇಶಕ್ಕೆ ಭಾರತೀಯ ಯುವಕರನ್ನು ಕಳ್ಳಸಾಗಣೆ ಮಾಡುತ್ತಿದ್ದರು. ಲಾವೋಸ್‌ನಲ್ಲಿ ಯುರೋಪಿಯನ್ ಮತ್ತು ಅಮೆರಿಕ ಪ್ರಜೆಗಳನ್ನು ಗುರಿಯಾಗಿಸಿಕೊಂಡು ಸೈಬರ್ ಹಗರಣಗಳನ್ನು ನಡೆಸುವಂತೆ ಯುವಕರನ್ನು ಒತ್ತಾಯಿಸಲಾಗುತ್ತಿತ್ತು ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.