HEALTH TIPS

ಇಂಫಾಲ್‌: ಶಂಕಿತ ಉಗ್ರರ ದಾಳಿ

ಇಂಪಾಲ್‌: ಮಣಿಪುರದ ಇಂಫಾಲ್‌ ಜಿಲ್ಲೆಯ ಕದಂಗಬಂದ್‌ ಪ್ರದೇಶದಲ್ಲಿ ಶಂಕಿತ ಉಗ್ರರು ಬುಧವಾರ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಕಾಂಗಪೋಕ್ಪಿ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಮಧ್ಯರಾತ್ರಿ 1 ಗಂಟೆ ವೇಳೆಗೆ ಕದಂಗಬಂದ್‌ನ ತಗ್ಗು ಪ್ರದೇಶದಲ್ಲಿ ಬಾಂಬ್‌ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚುವರಿ ಭದ್ರತಾ ಪಡೆ ಸ್ಥಳಕ್ಕೆ ಬಂದರೂ, ಗ್ರಾಮದಲ್ಲಿ ನಿಯೋಜಿಸಲಾಗಿದ್ದ ಸ್ವಯಂಸೇವಕರು ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅವರು ತಿಳಿಸಿದರು.

ದಾಳಿಯಿಂದ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದ ಗ್ರಾಮಸ್ಥರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries