ಇಂಫಾಲ: ನಿಷೇಧಿತ ಸಂಘಟನೆಗಳ ಮೂವರು ಕಾರ್ಯಕರ್ತರನ್ನು ಮಣಿಪುರದ ತೌಬಾಲ್ ಹಾಗೂ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಬಂಧಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಷೇಧಿತ ಕಾಂಗ್ಲೇಪಾಕ್ ಕಮ್ಯುನಿಸ್ಟ್ ಪಕ್ಷದ (ಪಿಡಬ್ಲ್ಯೂಜಿ) ಇಬ್ಬರು ಕಾರ್ಯಕರ್ತರನ್ನು ಗುರುವಾರ ಉನಿಂಗ್‌ಖೋಂಗ್‌ನಲ್ಲಿ ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅವರಿಂದ ಪಿಸ್ತೂಲು, ಮದ್ದುಗುಂಡು, ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಿಷೇಧಿತ ಕಂಗೆಲಿ ಯಾವೊಲ್ ಕನ್ನಾ ಲುಪ್ (KYKL) ಸಂಘಟನೆಯ ಕಾರ್ಯಕರ್ತನನ್ನು ಇಂಫಾಲ ಪಶ್ಚಿಮ ಜಿಲ್ಲೆಯ ಲಂಗೋಲ್‌ನಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.