ಬದಿಯಡ್ಕ: ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಠ ಕಿಳಿಂಗಾರು ನಿಡುಗಳ ಇದರ ತೃತೀಯ ವಾರ್ಷಿಕೋತ್ಸವವು ಭಾನುವಾರ ಜರಗಿತು. ಬೆಳಗ್ಗೆ ಗಣಪತಿ ಹೋಮ ನಡೆಯಿತು. ನಂತರ ವಿವಿಧ ಭಜನಾ ಸಂಘಗಳಿಂದ ಭಜನೆ ನಡೆಯಿತು. ಮಧ್ಯಾಹ್ನ ಶರಣಂ ವಿಳಿ, ಮಹಾಪೂಜೆ, ಭೋಜನಪ್ರಸಾದ ನಡೆಯಿತು. ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಠ ಕಿಳಿಂಗಾರು ನಿಡುಗಳ, ಓಂಕಾರ್ ಬಾಲಗೋಕುಲ ರತ್ನಗಿರಿ, ಶ್ರೀ ಅಯ್ಯಪ್ಪ ಮಹಿಳಾ ಭಜನಾ ಸಂಘ ಶಾಸ್ತಾನಗರ ಮಜಿರ್ಪಳ್ಳಕಟ್ಟೆ, ಶ್ರೀ ಕುದ್ರೆಕ್ಕಾಳಿ ಅಮ್ಮ ಭಜನಾ ಸಂಘ ರತ್ನಗಿರಿ, ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಂಘ ಶಾಸ್ತಾನಗರ ಭಜನಾ ಸೇವೆಯಲ್ಲಿ ಪಾಲ್ಗೊಂಡಿದ್ದರು. ರಾತ್ರಿ ಮಹಾಮಂಗಳಾರತಿ, ಪ್ರಸಾದ ವಿತರಣೆ, ಭೋಜನ ಪ್ರಸಾದದೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.