ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ ಇಂದಿನಿಂದ (ಶನಿವಾರ) ಆರಂಭವಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬಾಲ ರಾಮಮೂರ್ತಿಗೆ ಅಭಿಷೇಕ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಹಾ ಆರತಿ ಬೆಳಗಿ ದೇವರಿಗೆ 56 ತಿನಿಸುಗಳನ್ನು ಅರ್ಪಿಸಿದರು.
ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು ನಾನಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಮೂರು ದಿನಗಳವರೆಗೆ (ಜನವರಿ 11ರಿಂದ 13ರವರೆಗೆ) ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಟ್ರಸ್ಟ್ ತಿಳಿಸಿದೆ.
ಬರುಬ ಭಕ್ತರಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನೀರು, ವಾಸ್ತವ್ಯ ಟೆಂಟ್‌ಗಳು, ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹಾಗೂ ಭದ್ರತೆಗೆ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ.
ಮೂರು ದಿನಗಳಲ್ಲಿ ದೇಶ, ವಿದೇಶಗಳಿಂದ ಲಕ್ಷಾಂತರರ ಭಕ್ತಾದಿಗಳು ಆಗಮಿಸುವ ನೀರಿಕ್ಷೆ ಇದೆ. ವಿವಿಐಪಿಗಳಿಗೆ ಪ್ರತ್ಯೇಕ ದರ್ಶನದ ವ್ಯವಸ್ಥೆ ಮಾಡಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ.