ನವದೆಹಲಿ: ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ವೀರೇಂದ್ರ ಅವರ ಸ್ಪರ್ಧೆಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು ಕೆಲ ದಿನಗಳಲ್ಲಿ ಅಂತಿಮ ನಿರ್ಧಾರ ಹೊರಬರಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈಗಾಗಲೇ ಎಎಪಿಯು ತಮ್ಮ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಯಾವುದೇ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿಲ್ಲ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಂಬರುವ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ.
2015ರಿಂದ ಎಎಪಿ ಅಧಿಕಾರದಲ್ಲಿದೆ. ಎರಡು ಸಲ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತ ಪಡೆದು ಅಧಿಕಾರದಲ್ಲಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಒಂದೂ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಬಿಜೆಪಿ ಎಲ್ಲಾ ಕ್ಷೇತ್ರಗಳನ್ನು ಗೆದ್ದುಕೊಂಡಿದೆ.
ಈಗಾಗಲೇ ಎಎಪಿ ನಾಯಕರು ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯು ಕೂಡ ಪ್ರಚಾರಕ್ಕೆ ಇಳಿದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಪರ ಪ್ರಚಾರದಲ್ಲಿ ಭಾಗವಹಿಸುತ್ತಿದ್ದಾರೆ.