HEALTH TIPS

ರೈತರ ಪ್ರತಿಭಟನೆ: ಮಾತುಕತೆಗೆ ಬರಲು ಎಸ್‌ಕೆಎಂ ನಕಾರ

ಚಂಡೀಗಢ: ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸುಪ್ರೀಂ ಕೋರ್ಟ್‌ ರಚಿಸಿರುವ ಉನ್ನತಾಧಿಕಾರ ಸಮಿತಿಯು ಗುರುವಾರ ಆಯೋಜಿಸಿರುವ ಸಭೆಗೆ ಹಾಜರಾಗಲು ತನ್ನಿಂದ ಆಗುತ್ತಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬುಧವಾರ ಹೇಳಿದೆ.

ಉನ್ನತಾಧಿಕಾರ ಸಮಿತಿಯು ತನಗೆ ಮಾತುಕತೆಗೆ ಬರುವಂತೆ ಆಹ್ವಾನ ನೀಡಿದೆ ಎಂದು ಎಸ್‌ಕೆಎಂ ಹೇಳಿದೆ.

ಆದರೆ, ಶಂಭು ಮತ್ತು ಖಾನೌರಿ ಗಡಿಯಲ್ಲಿನ ಪ್ರತಿಭಟನೆಯಲ್ಲಿ ತಾನು ಭಾಗಿಯಲ್ಲ ಎಂದು ಎಸ್‌ಕೆಎಂ ಹೇಳಿದೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ವರ್ಷದ ಫೆಬ್ರುವರಿ 13ರಿಂದಲೂ ಅವರು ಶಂಭು ಮತ್ತು ಖಾನೌರಿ ಗಡಿಯಲ್ಲಿ ಬೀಡು ಬಿಟ್ಟಿದ್ದಾರೆ.

'ಎಸ್‌ಕೆಎಂ ತಾತ್ವಿಕವಾಗಿ ಕೋರ್ಟ್‌ ಮಧ್ಯಪ್ರವೇಶವನ್ನು ಒಪ್ಪುವುದಿಲ್ಲ. ಏಕೆಂದರೆ ರೈತರು ನೀತಿಗಳಿಗೆ ಸಂಬಂಧಿಸಿದ ವಿಚಾರವಾಗಿ ಕೇಂದ್ರದ ವಿರುದ್ಧ ಹೋರಾಟ ನಡೆಸಿದ್ದಾರೆ. ಹೀಗಾಗಿ ಕೋರ್ಟ್‌ಗೆ ಇಲ್ಲಿ ಪಾತ್ರ ಇಲ್ಲ' ಎಂದು ಹೇಳಿಕೆಯಲ್ಲಿ ಎಸ್‌ಕೆಎಂ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries