ಸಮರಸ ಚಿತ್ರಸುದ್ದಿ: ಮಧೂರು: ರಾಜ್ಯಸಭಾ ಸದಸ್ಯ ಕೆ. ನಾರಾಯಣ್ ಅವರು ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದರು. ಈ ಸಂದರ್ಭ ಮಾ. 27ರಿಂದ ಏ. 7ರ ವರೆಗೆ ನಡೆಯುವ ಅಷ್ಟಬಂಧಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಬಗ್ಗೆ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಅವರಿಗೆ ಮಾಹಿತಿ ನೀಡಿದರು. ಕಾರ್ಯಖ್ರಮಕ್ಕೆ ಸಂಪೂರ್ಣ ಸಹಕಾರದ ಭರವಸೆ ನೀಡಿದರು. ಮುಖ್ಯ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ ಶ್ರೀದೇವರ ಪ್ರಸಾದ ನೀಡಿದರು. ಬ್ರಹ್ಮಕಲಶೋತ್ಸ ಸಮಿತಿ ಪದಾಧಿಕಾರಿಗಳು, ದೇವಸ್ಥಾದ ಅಧಿಕಾರಿಗಳು ಉಪಸ್ಥಿತರಿದ್ದರು.