HEALTH TIPS

ಅರ್ಥಧಾರಿ, ನಿವೃತ್ತ ಶಿಕ್ಷಕ, ಪಕಳಕುಂಜ ಶ್ಯಾಮ ಭಟ್ ವಿಧಿವಶ

ವಿಟ್ಲ: ನಿವೃತ್ತ ಶಿಕ್ಷಕ, ಯಕ್ಷಗಾನ ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್(76) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿನ್ನೆ ರಾತ್ರಿ ನಿಧನರಾದರು. ಮೃತರು ಪತ್ನಿ, ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
2007ರ ವರೆಗೆ ಪಕಳಕುಂಜದಲ್ಲಿ ವಾಸ್ತವ್ಯವಿದ್ದ ಶ್ಯಾಮ ಭಟ್ಟರು ಪ್ರಸ್ತುತ ಅಳಿಕೆಯಲ್ಲಿ ನೆಲೆಸಿದ್ದರು.
23-12-1949ರಂದು ನಾರಾಯಣ ಭಟ್ ಮತ್ತು ಪರಮೇಶ್ವರಿ ಅಮ್ಮ ದಂಪತಿಗಳಿಗೆ ಮಗನಾಗಿ ಜನಿಸಿದರು. ತಂದೆಯವರ ಸಂಚಾಲಕತ್ವದ ವೇಣುಗೋಪಾಲ ಹಿರಿಯ ಪ್ರಾಥಮಿಕ ಶಾಲೆ ಪಕಳಕುಂಜ ಇಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ. ಹೈಸ್ಕೂಲು ವಿದ್ಯಾಭ್ಯಾಸವನ್ನು ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯಲ್ಲಿ ಪೂರೈಸಿದರು. ವಿವೇಕಾನಂದ ಕಾಲೇಜಿನಲ್ಲಿ (ಪುತ್ತೂರು) ವ್ಯಾಸಂಗ ಮಾಡಿ ಬಿ.ಎಸ್ಸಿ. ಪದವಿಯನ್ನು ಪಡೆದ (ಬಯೋಲಜಿ) ಶ್ಯಾಮ ಭಟ್ಟರು ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದರು. ನಂತರ ಸರಕಾರೀ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಬಿ.ಎಡ್. ಶಿಕ್ಷಣವನ್ನು ಪೂರೈಸಿದರು. ವಿಠಲ ಪದವಿಪೂರ್ವ ಕಾಲೇಜು ವಿಟ್ಲದಲ್ಲಿ 32 ವರ್ಷ ಅಧ್ಯಾಪಕನಾಗಿ ಸೇವೆ ಸಲ್ಲಿಸಿದ್ದಾರೆ.
ಮೃತರು  ಬರೆದ ಅನೇಕ ಅಪ್ರಕಟಿತ ಪುಸ್ತಕಗಳಿವೆ. ಉಳಿಯ ಧನ್ವಂತರೀ ಯಕ್ಷಗಾನ ಕಲಾ ಸಂಘದ ವತಿಯಿಂದ ನಡೆದ ತಾಳಮದ್ದಳೆ ಸ್ಪರ್ಧೆಯಲ್ಲಿ ಯಕ್ಷಸಿಂಧೂರ ಪ್ರತಿಷ್ಠಾನ (ರಿ.), ವಿಟ್ಲ ತಂಡಕ್ಕೆ ಪ್ರಥಮ ಪ್ರಶಸ್ತಿ ಬಂದಿತ್ತು. ಆ ತಂಡದ ಸದಸ್ಯನಾಗಿ ಶ್ಯಾಮ ಭಟ್ಟರು ಶ್ರೇಷ್ಠ ಅರ್ಥಧಾರಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದಿದ್ದರು. ಹಲವೆಡೆಗಳಲ್ಲಿ ಸಂಘ-ಸಂಸ್ಥೆಗಳಿಂದ ಸಮ್ಮಾನಗಳನ್ನು ಪಡೆದ ಶ್ರೀಯುತರು ಒರಿಸ್ಸಾದಲ್ಲಿ ಕನ್ನಡ ಸಂಘದ ವತಿಯಿಂದ ಸುನಾಬೇಡ ಎಂಬಲ್ಲಿ (1984), ಬೆಂಗಳೂರು, ಮುಂಬಯಿ ಮೊದಲಾದ ಕಡೆಗಳಲ್ಲಿ ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
ಶ್ಯಾಮ ಭಟ್ ಅವರು ತಮ್ಮದೇ ಆದ ಶ್ಯೆಲಿಯ ಮೂಲಕ ತಾಳಮದ್ದಳೆ ಅರ್ಥಧಾರಿಯಾಗಿ ಜನಮನ ಸೆಳೆದಿದ್ದರು. ಸರಳ ವ್ಯೆಕ್ತಿತ್ವದ ಭಟ್ಟರ ನಿಧನ ಹವ್ಯಾಸಿ ಯಕ್ಷಗಾನ ವಲಯಕ್ಕೆ ತುಂಬಲಾರದ ನಷ್ಟ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries