ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಕಾರ್ಯಕರ್ತನನ್ನು ಮಂಗಳವಾರ ಬೆಳಗ್ಗೆ ಗುಡಿಂಕ್ಕಿ ಹತ್ಯೆ ಮಾಡಲಾಗಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಮೃತನನ್ನು ಹಸನ್ ಶೇಖ್ ಎಂದು ಗುರುತಿಸಲಾಗಿದೆ. ಬಕುಲ್ ಶೇಖ್, ಇರ್ಫಾನ್ ಶೇಖ್ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇಲ್ಲಿನ ಕಾಳಿಗಂಜ್ ಪ್ರದೇಶದಲ್ಲಿ ರಸ್ತೆ ಉದ್ಘಾಟನೆ ಸಮಾರಂಭಕ್ಕೆ ಹೋದಾಗ ಈ ಘಟನೆ ಜರುಗಿದೆ. ಪಕ್ಷದಲ್ಲಿನ ಒಳ ಜಗಳ ಈ ಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಈವರೆಗೂ ಯಾರನ್ನು ಬಂಧಿಸಿಲ್ಲ.
ಮಾಲ್ಢಾದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗಾಯಗೊಂಡ ಇಬ್ಬರು ಕಾರ್ಯಕರ್ತರು ಚಿಕಿತ್ಸೆ ಒಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಮಾಹಿತಿ ನೀಡಿದರು.
ಎರಡು ವಾರದ ಹಿಂದೆ ಮಾಲ್ಡಾ ಟಿಎಂಸಿ ಕೌನ್ಸಿಲರ್ ದುಲಾಲ್ ಸರ್ಕಾರ್ ಅವರನ್ನು ಹತ್ಯೆ ಮಾಡಲಾಗಿತ್ತು.