ಸೂರತ್: ಸೂರತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್‌ಎಫ್) ಸೇರಿದ ಯೋಧರೊಬ್ಬರು ತನ್ನ ಸರ್ವೀಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸಿಐಎಸ್‌ಎಫ್ ಸಿಬ್ಬಂದಿ ಕಿಸಾನ್ ಸಿಂಗ್ (32) ಆತ್ಮಹತ್ಯೆಗೆ ಶರಣಾದವರು.
ಇಂದು ಮಧ್ಯಾಹ್ನ 2.10ರ ಸುಮಾರಿಗೆ ವಿಮಾನ ನಿಲ್ದಾಣದ ವಾಶ್‌ರೂಮ್‌ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿನ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದೂ ಅವರು ತಿಳಿಸಿದ್ದಾರೆ.