ದೇರ್ ಅಲ್ ಬಲಾಹ್ : ಇಸ್ರೇಲ್ ಪಡೆಗಳು ಆಹೋರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಲ್ ಅಕ್ಸಾ ಹುತಾತ್ಮರ ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.
ನುಸೈರತ್, ಝವಾದಿಯಾ, ಮಘಾಝಿ ಹಾಗೂ ದೇರ್ ಅಲ್ ಬಲಾಹ್ ಸೇರಿ ಕೇಂದ್ರ ಗಾಜಾದ ಹಲವು ಪ್ರದೇಶಗಳಲ್ಲಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಡಜನ್‌ಗೂ ಅಧಿಕ ಮಕ್ಕಳು ಹಾಗೂ ಮಹಿಳೆಯರು ಸೇರಿ 30ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.
ಈ ದಾಳಿಯ ಬಗ್ಗೆ ಇಸ್ರೇಲ್ ಸೇನೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ದಾಳಿ ಮಾಡಲು ಯೋಜನೆ ರೂಪಿಸುತ್ತಿದ್ದ ಹಮಾಸ್ ಕೇಂದ್ರಗಳು, ಕಮಾಂಡ್ ಹಾಗೂ ಕಂಟ್ರೋಲ್ ಸೆಂಟರ್‌ಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಇಸ್ರೇಲ್ ಹೇಳಿದೆ. ನಾಗರಿಕರ ಮೇಲಾಗುವ ಹಾನಿ ತಡೆಯಲು ಈ ದಾಳಿ ಮಾಡಿದ್ದೇವೆ ಎಂದು ಇಸ್ರೇಲ್ ಹೇಳಿದೆ.