HEALTH TIPS

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹರಡುತ್ತಿದ್ದಾರೆ: PM ನರೇಂದ್ರ ಮೋದಿ

ನವದೆಹಲಿ: 'ಜಾತಿ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ವಿಷವನ್ನು ಹರಡುತ್ತಿದ್ದಾರೆ. ಇಂಥವರ ಸಂಚುಗಳಿಂದ ದೂರವಿದ್ದು ಸಂಸ್ಕೃತಿ ಹಾಗೂ ಪರಂಪರೆಗಳನ್ನು ಪರಸ್ಪರ ಹಂಚಿಕೊಂಡು ಬದುಕುವ ಗ್ರಾಮಗಳನ್ನು ಇನ್ನಷ್ಟು ಬಲಪಡಿಸಬೇಕಿದೆ' ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗ್ರಾಮೀಣ ಭಾರತ ಮಹೋತ್ಸವವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, '2014ರಿಂದ ಕೇಂದ್ರ ಸರ್ಕಾರವು ಗ್ರಾಮಗಳ ಅಭಿವೃದ್ಧಿ ಕಡೆಗೆ ಗಮನ ಹರಿಸಿದೆ. ಆ ಮೂಲಕ 2047ರ ವಿಕಸಿತ ಭಾರತ ಪರಿಕಲ್ಪನೆ ಸಾಕಾರಕ್ಕೆ ನೆರವಾಗಲಿದೆ' ಎಂದಿದ್ದಾರೆ.

'ಗ್ರಾಮೀಣ ಜನರ ಘನತೆ ಹಾಗೂ ಜೀವನದ ಗುಣಮಟ್ಟವನ್ನು ಉತ್ತಮಪಡಿಸುವುದೇ ನಮ್ಮ ಸರ್ಕಾರದ ಮುಖ್ಯ ಧ್ಯೇಯ. ಸ್ವಚ್ಛ ಭಾರತ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲಿ ಶೌಚಾಲಯ ನಿರ್ಮಾಣ, ಪಿಎಂ ಆವಾಸ್ ಯೋಜನೆಯಡಿ ಸೂರಿಲ್ಲದವರಿಗೆ ಸುಸಜ್ಜಿತ ಮನೆ, ಜಲ ಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಬಾಗಿಲಿಗೂ ಶುದ್ಧ ಕುಡಿಯುವ ನೀರು ನೀಡಲಾಗಿದೆ. 1.5 ಲಕ್ಷಕ್ಕೂ ಅಧಿಕ ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ನಿರ್ಮಿಸಲಾಗಿದೆ' ಎಂದು ಹೇಳಿದ್ದಾರೆ.

'ಗ್ರಾಮೀಣ ಭಾಗದ ಆರ್ಥಿಕ ಅಭಿವೃದ್ಧಿಗೆ ಅಗತ್ಯವಾದ ನೀತಿಗಳನ್ನು ಜಾರಿಗೆ ತರಲಾಗಿದೆ. ಈ ಎಲ್ಲಾ ಅಭಿವೃದ್ಧಿ ಕಾರ್ಯಗಳಿಂದ ಗ್ರಾಮಗಳನ್ನು ಬೆಳವಣಿಗೆ ಹಾಗೂ ಅವಕಾಶಗಳ ಕೇಂದ್ರಗಳನ್ನಾಗಿ ಪರಿವರ್ತಿಸುವ ಕೆಲಸ ನಡೆದಿದೆ.

ದಶಕದ ಶ್ರಮಕ್ಕೆ ಈಗ ಸಿಗುತ್ತಿದೆ ಫಲ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ಸುಮಾರು ₹3ಲಕ್ಷ ಕೋಟಿ ಆರ್ಥಿಕ ನೆರವು ನೀಡಲಾಗಿದೆ. ಕೃಷಿ ಸಾಲದ ಪ್ರಮಾಣವನ್ನು 3.5 ಪಟ್ಟು ಹೆಚ್ಚಿಸಲಾಗಿದೆ. ಪಶು ಸಂಗೋಪನೆ ಹಾಗೂ ಮೀನುಗಾರಿಕೆಯಲ್ಲಿ ತೊಡಗುವ ರೈತರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. ಸುಮಾರು 9 ಸಾವಿರ ರೈತ ಉತ್ಪಾದಕ ಸಂಸ್ಥೆಗಳು ಆರ್ಥಿಕ ನೆರವು ಪಡೆದಿವೆ. ಕಳೆದ ಹತ್ತು ವರ್ಷಗಳಲ್ಲಿ ರೈತರು ಬೆಳೆದ ಬೆಳೆಗೆ ನಿರಂತರವಾಗಿ ಬೆಂಬಲ ಬೆಲೆ ಘೋಷಿಸಿಕೊಂಡು ಬರಲಾಗುತ್ತಿದೆ. ಕಳೆದ ಒಂದು ದಶಕದಲ್ಲಿ ಪಟ್ಟ ಶ್ರಮದ ಫಲ ಈಗ ಸಿಗುತ್ತಿದೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

'ಈ ಹಿಂದೆ ಗ್ರಾಮೀಣ ಭಾಗದ ಜನರು ತಮ್ಮ ದುಡಿಮೆಯ ಆದಾಯದ ಶೇ 50ರಷ್ಟನ್ನು ಆಹಾರಕ್ಕೆ ಖರ್ಚು ಮಾಡಬೇಕಿತ್ತು. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರ ಗ್ರಾಮೀಣ ಭಾಗದವರ ಖರ್ಚು ಶೇ 50ರಷ್ಟು ತಗ್ಗಿದೆ. ಇದರಿಂದಾಗ ಇತರ ಅಗತ್ಯ ವಸ್ತುಗಳ ಖರೀದಿಗೆ ಜನರು ಆಸಕ್ತಿ ತೋರಿರುವುದರಿಂದ ಅವರ ಜೀವನ ಮಟ್ಟವೂ ಸುಧಾರಿಸಿದೆ' ಎಂದಿದ್ದಾರೆ.

'ಹಿಂದಿನ ಸರ್ಕಾರಗಳು ಗ್ರಾಮಗಳಲ್ಲಿ ವಾಸಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳನ್ನು ನಿರ್ಲಕ್ಷಿಸಿದ್ದವು. ಇದರ ಪರಿಣಾಮಿ ಅವರು ದುಡಿಮೆ ಅರಸಿ ಗುಳೇ ಹೋಗುತ್ತಿದ್ದರು. ಬಡತವೂ ಹೆಚ್ಚಾಗಿ, ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವೆ ದೊಡ್ಡ ಕಂದಕ ಸೃಷ್ಟಿಸಿತ್ತು. ಆದರೆ ಇಂದು ಗ್ರಾಮೀಣ ಭಾಗದ ಬಡತನ ಶೇ 26ರಷ್ಟು ಕುಸಿದಿದೆ ಎಂದು ಎಸ್‌ಬಿಐ ಸಮೀಕ್ಷೆಯಲ್ಲಿ ಹೇಳಲಾಗಿದೆ' ಎಂದು ಹಿಂದಿನ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries