ತಿರುವನಂತಪುರ: ಇತ್ತೀಚೆಗೆ ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಮೈತ್ರಿಕೂಟ ಜಯ ಸಾಧಿಸಿದೆ.
ಇತ್ತೀಚೆಗೆ ಕೇರಳದ 13 ಜಿಲ್ಲೆಗಳಲ್ಲಿ 30 ವಾರ್ಡ್‌ಗಳಿಗೆ ಮತದಾನ ನಡೆದಿತ್ತು. ಈ ಪೈಕಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಮೈತ್ರಿಕೂಟ 15 ಸ್ಥಾನಗಳಲ್ಲಿ ಜಯ ಸಾಧಿಸಿದೆ.
ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ 12 ಸ್ಥಾನಗಳಲ್ಲಿ ಗೆದ್ದರೆ, ಪಕ್ಷೇತರ ಅಭ್ಯರ್ಥಿಗಳು ಮೂರು ವಾರ್ಡ್‌ಗಳಲ್ಲಿ ಜಯ ದಾಖಲಿಸಿದ್ದಾರೆ.
ಬಿಜೆಪಿ ನೇತೃತ್ವದ ಎನ್‌ಡಿಎ ಒಂದೂ ಸ್ಥಾನವನ್ನು ಗೆಲ್ಲಲು ಸ್ಥಾಧ್ಯವಾಗಿಲ್ಲ.
ಫಲಿತಾಂಶದ ಅಂಕಿ ಅಂಶಗಳನ್ನು ಕೇರಳ ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಬಿಡುಗಡೆ ಮಾಡಿದೆ.