ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ 10 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ಲಾಟ್‌ಫಾರ್ಮ್ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ ಏಕಾಏಕಿ ನೂಕುನುಗ್ಗಲು ಉಂಟಾಗಿದ್ದಯ, ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ.
ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.
'ರೈಲ್ವೆ ಪೊಲೀಸರು ಮತ್ತು ದೆಹಲಿ ಪೊಲೀಸರು ನಿಲ್ದಾಣ ತಲುಪಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ' ಎಂದು ಭಾರತೀಯ ರೈಲ್ವೆಯು ತಿಳಿಸಿದೆ.