ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಗಾಯತ್ರೀ ದೇವೀ ಹಾಗೂ ಭಗವಾನ್ ಶ್ರೀ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮ ಕೊಂಡೆವೂರು ಮಠದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಶ್ರೀಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕÀ ಬ್ರಹ್ಮಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣರವರ ಆಚಾರ್ಯತ್ವದಲ್ಲಿ ಫೆ.22 ಶನಿವಾರದಂದು, ಚಂಡಿಕಾ ಹೋಮ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅದೇ ದಿನ ಸೂರ್ಯಾಸ್ತ 6.36 ಕ್ಕೆ ಪರಮಪೂಜ್ಯ ಶ್ರೀಗಳು ಭಜನಾ ಸಪ್ತಾಹದ ದೀಪಪ್ರಜ್ವಲನೆ ಗೈಯಲಿದ್ದಾರೆ. ಮಾ. 01 ರಂದು ಸೂರ್ಯಾಸ್ತ 6.37 ಕ್ಕೆ ಭಜನಾ ಮಂಗಳಾಚರಣೆ ಜರಗಲಿರುವುದು.
ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಬೇಕಾಗಿ ಕೊಂಡೆವೂರು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.