ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಗಾಯತ್ರೀ ದೇವಿ ಹಾಗೂ ಭಗವಾನ್ ನಿತ್ಯಾನಂದ ಗುರುದೇವರ ಪ್ರತಿμÁ್ಠ ವರ್ಧಂತಿ ಕಾರ್ಯಕ್ರಮವು ಕೊಂಡೆವೂರು ಮಠದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಶ್ರೀಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣ ಮತ್ತು ಬ್ರಹ್ಮಶ್ರೀ ಹರಿನಾರಾಯಣ ದಾಸ ಆಸ್ರಣ್ಣರವರ ಆಚಾರ್ಯತ್ವದಲ್ಲಿ ಫೆ.22 ರಂದು ಶನಿವಾರ ಚಂಡಿಕಾ ಹೋಮ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ಅದೇ ದಿನ ಸೂರ್ಯಾಸ್ತ 6.37 ಕ್ಕೆ ಪರಮಪೂಜ್ಯ ಶ್ರೀ ಗಳವರು ದೀಪಪ್ರಜ್ವಲನೆ ಮಾಡುವುದರ ಮೂಲಕ ಅಖಂಡ ಭಜನಾ ಸಪ್ತಾಹಕ್ಕೆ ಚಾಲನೆ ನೀಡಿದರು.