ಕಣ್ಣೂರು: ಕೇರಳದ ತಲಶ್ಶೇರಿ ಬಳಿಯ ದೇವಾಲಯ ಉತ್ಸವದ ಸಂದರ್ಭದಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 27 ಸಿಪಿಐ(ಎಂ) ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಮಧ್ಯರಾತ್ರಿ 12.10ರ ಸುಮಾರಿಗೆ ಬಿಜೆಪಿ ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವೆ ವಾಗ್ವಾದ ಪ್ರಾರಂಭವಾಗಿತ್ತು. ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ಘರ್ಷಣೆಯನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಡಳಿತಾರೂಢ ಎಡಪಕ್ಷದ ಕಾರ್ಯಕರ್ತರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ಆರೋಪಿಗಳು ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 27 ಸಿಪಿಐ(ಎಂ) ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.