HEALTH TIPS

ಛತ್ತೀಸಗಢ | ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಸಾವು: ಇಬ್ಬರು ಭದ್ರತಾ ಸಿಬ್ಬಂದಿ ಹತ

Top Post Ad

Click to join Samarasasudhi Official Whatsapp Group

Qries

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಎಡಪಂಥೀಯ ತೀವ್ರಗಾಮಿ ಹೋರಾಟಗಾರರ ವಿರುದ್ಧ ನಡೆಸಿದ ಕಾರ್ಯಾಚರಣೆ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಪಡೆಯ ಇಬ್ಬರು ಸಿಬ್ಬಂದಿಯೂ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಈ ವರ್ಷ ಒಟ್ಟು 81 ನಕ್ಸಲರು ಭದ್ರತಾ ಪಡೆಗಳಿಂದ ಹತರಾದಂತಾಗಿದೆ.

ಭಾನುವಾರ ಬೆಳಿಗ್ಗೆ ಇಂದ್ರಾವತಿ ನ್ಯಾಷನಲ್ ಪಾರ್ಕ್ ಸಮೀಪದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲ್ ನಿಗ್ರಹ ಪಡೆ ನಡೆಸಿದ ಜಂಟಿ ಕಾರ್ಯಾಚರಣೆ ಇದಾಗಿದೆ ಎಂದು ಬಸ್ತಾರ್ ವಲಯದ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಸುಂದರ್‌ ರಾಜ್ ಪಿ. ತಿಳಿಸಿದ್ದಾರೆ.

'ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಿಂದ ಭಾರಿ ಪ್ರಮಾಣದ ಆಯುಧಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ' ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ ಹಾಗೂ ವಿಶೇಷ ಕಾರ್ಯಪಡೆಯ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡಿರುವವರು ಅಪಾಯದಿಂದ ಪಾರಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ಕರೆಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಈ ವರ್ಷ ಸಾವಿಗೀಡಾದ ಒಟ್ಟು 81 ನಕ್ಸಲರಲ್ಲಿ, 65 ಮಂದಿಯನ್ನು ಬಸ್ತಾರ್‌ ವಲಯದಲ್ಲೇ ಕೊಲ್ಲಲಾಗಿದೆ.

ಕಳೆದ ವರ್ಷ ಛತ್ತೀಸಗಢದ ವಿವಿಧೆಡೆ ನಡೆದ ಎನ್‌ಕೌಂಟರ್‌ನಲ್ಲಿ 219 ನಕ್ಸಲರನ್ನು ಕೊಲ್ಲಲಾಗಿತ್ತು.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries