ಮುಂಬೈ: ಮಹಾರಾಷ್ಟ್ರದಲ್ಲಿ ಶಂಕಿತ ಗೀಲನ್ ಬಾರೆ (ಜಿಬಿಎಸ್) ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ.
'ರಾಜ್ಯದಲ್ಲಿ ಶಂಕಿತ ಜಿಬಿಎಸ್ ಸೋಂಕಿನ 140 ಪ್ರಕರಣಗಳು ವರದಿಯಾಗಿವೆ. ಈ ಪೈಕಿ, 98 ಪ್ರಕರಣಗಳಲ್ಲಿ ಜಿಬಿಎಸ್ ಸೋಂಕು ದೃಢಪಟ್ಟಿದೆ. ಈವರೆಗೆ ನಾಲ್ವರು ಮೃತಪಟ್ಟಿದ್ದಾರೆ' ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ. 18 ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ತಿಳಿಸಿದ್ದಾರೆ.