ಪಟ್ನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಇಂದು (ಸೋಮವಾರ) ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಅಲ್ಲದೇ ರಾಜ್ಯದ ಹಲವು ಸ್ಥಳಗಳಲ್ಲಿ ಭೂಕಂಪದ ಅನುಭವವಾಗಿದೆ.
ಬೆಳಿಗ್ಗೆ 8.02ರ ವೇಳೆಗೆ ಸಿವಾನ್‌ನಲ್ಲಿ 10 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಓಅS) ಮಾಹಿತಿ ನೀಡಿದೆ.
ಸಿವಾನ್ ಮತ್ತು ಸುತ್ತಮುತ್ತಲಿನ ಇತರ ಜಿಲ್ಲೆಗಳಲ್ಲಿ ಭೂಕಂಪದ ಅನುಭವವಾಗಿದೆ. ಆದರೆ ಯಾವುದೇ ಆಸ್ತಿಪಾಸ್ತಿ ಹಾನಿ ಅಥವಾ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಬಿಹಾರ ವಿಪತ್ತು ನಿರ್ವಹಣಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪ್ರತ್ಯಯ ಅಮೃತ್ ತಿಳಿಸಿದ್ದಾರೆ.
ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಇಂದು (ಸೋಮವಾರ) ಮುಂಜಾನೆ 5:36ಕ್ಕೆ ಪ್ರಬಲ ಭೂಕಂಪ ಸಂಭವಿಸಿದೆ.