ಕೊಟ್ಟಾಯಂ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಪಿ.ಸಿ. ಜಾರ್ಜ್ ಸೋಮವಾರ ಈರಾಟ್ಟುಪೇಟ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಜಾರ್ಜ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದರು.
ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸುತ್ತಿದ್ದಂತೆ, ಪೊಲೀಸರು ಜಾರ್ಜ್ ಬಂಧನಕ್ಕೆ ಮುಂದಾಗಿದ್ದರು. ಬಂಧನದಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ.
ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಫೆ.24ರವರೆಗೂ ವಿನಾಯಿತಿ ನೀಡುವಂತೆ ಜಾರ್ಜ್ ಶನಿವಾರ ಪೊಲೀಸರಿಗೆ ಮನವಿ ಮಾಡಿದ್ದರು.