ದಾಂತೇವಾಡ: ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ 'ಪೊಲೀಸ್ ಮಾಹಿತಿದಾರರು' ಎಂದು ಶಂಕಿಸಿ ನಕ್ಸಲರು ಇಬ್ಬರು ವ್ಯಕ್ತಿಗಳನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಸಂಜೆ ಬರ್ಸೂರ್ ಪೊಲೀಸ್ ಠಾಣಾ ವ್ಯಾಪ್ತಿಯ ತೊಡ್ಮಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಈ ಕುರಿತು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ದಾಂತೇವಾಡ-ಬಿಜಾಪುರ ಜಿಲ್ಲೆಯ ಗಡಿಯಲ್ಲಿರುವ ಅರಣ್ಯಕ್ಕೆ ತೆರಳಿದ್ದಾರೆ. ಘಟನೆ ಕುರಿತು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಬಮನ್ ಕಶ್ಯಪ್ (29) ಮತ್ತು ಅನಿಸ್ ರಾಮ್ ಪೋಯಮ್ (38) ಮೃತರು.
ಇತ್ತೀಚೆಗೆ ಬಿಜಾಪುರ ಜಿಲ್ಲೆಯ ಗಡಿಯಲ್ಲಿರುವ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ಜೊತೆಗೆ ನಡೆದ ಗುಂಡಿನ ಚಕಮಕಿಯಲ್ಲಿ 31 ನಕ್ಸಲರು ಹತರಾಗಿದ್ದರು.