ಉಪ್ಪಳ: ನಂದಿಕೇಶ್ವರ ನಾಟಕ ಸಂಘ ಮಂಗಳೂರು ಹಾಗೂ ಕನ್ನಡ ಸಂಸ್ಕøತಿ ಇಲಾಖೆ ಬೆಂಗಳೂರು ಇದರ ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಕೊರೋಕೆ ಗಾಯನ ಕಾರ್ಯಕ್ರಮದಲ್ಲಿ ತುಳುರಂಗಭೂಮಿ ಕಲಾವಿದ ಸೋಮನಾಥ ಶೆಟ್ಟಿ ಮಂಗಲ್ಪಾಡಿ ಅವರಿಗೆ `ತುಳುನಾಡ ಕಲಾ ಸಿಂಧೂರ' ಎಂಬ ಬಿರುದು ನೀಡಿ ಸಮ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಭಾರತೀಯ ಮಾನವ ಹಕ್ಕುಗಳ ಮಂಡಳಿಯ ರಾಜ್ಯಾಧ್ಯಕ್ಷ ಪ್ರಸಾದ್ ರೈ, ನಿರ್ದೇಶಕ, ನಿರ್ಮಾಪಕ ಅಸ್ಕರ್ ಕೃಷ್ಣ , ನಟ ನಿರ್ಮಾಪಕ ನಂದನ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.