ಪೆರ್ಲ: ಉಕ್ಕಿನಡ್ಕ ಸಮೀಪದ ಏಳ್ಕಾನದಲ್ಲಿ ಕೆರೆಗೆ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ದಾರುಣ ಘಟನೆ ಶುಕ್ರವಾರ ನಡೆದಿದೆ. ಏಳ್ಕಾನ ದಟ್ಟಿಗೆಮೂಲೆ ನಿವಾಸಿ ಈಶ್ವರ ನಾಯ್ಕರ ಪತ್ನಿ ಪರಮೇಶ್ವರಿ (42) ಹಾಗೂ ಪುತ್ರಿ ಪದ್ಮಿನಿ (2) ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದ ಈಶ್ವರ ನಾಯ್ಕ್ ಸಂಜೆ ಮರಳಿದಾಗ ಅಡಕೆ ತೋಟದಲ್ಲಿರುವ ಕೆರೆಯಲ್ಲಿ ಪತ್ನಿ ಹಾಗೂ ಪುತ್ರಿಯ ಮೃತದೇಹ ಕಂಡುಬಂದಿದೆ. ಈಶ್ವರ ನಾಯ್ಕರ ಸಹೋದರ ಶಿವಪ್ಪ ನಾಯ್ಕ ಖಾಯಿಲೆ ಪೀಡಿತರಾಗಿದ್ದು ಹಾಸಿಗೆ ಹಿಡಿದಿದ್ದಾರೆ ಎಂದು ಹೇಳಲಾಗಿದೆ. ಮೃತದೇಹಗಳ ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಸರ್ಕಾರಿ ಆಸ್ಪತ್ರೆ ತಲುಪಿಸಲಾಗಿದೆ. ಬದಿಯಡ್ಕ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.