ಮಹಾಕುಂಭನಗರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕುಂಭಮೇಳಕ್ಕೆ ಸೋಮವಾರ ಭೇಟಿ ನೀಡಲಿದ್ದು, ಪುಣ್ಯಸ್ನಾನ ಮಾಡಲಿದ್ದಾರೆ. ಈ ಬಗ್ಗೆ ರಾಷ್ಟ್ರಪತಿ ಭವನವು ಪ್ರಕಟಣೆಯ ಮೂಲಕ ತಿಳಿಸಿದೆ.
ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ರಾಷ್ಟ್ರಪತಿಯವರು ಪುಣ್ಯಸ್ನಾನ ಮಾಡಿ, ಪೂಜೆ ಸಲ್ಲಿಸಲಿದ್ದಾರೆ.
ನಂತರ ಅಕ್ಷಯವಟ್ ಹಾಗೂ ಹನುಮಂತನ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೂ ಹೋಗಲಿದ್ದಾರೆ ಎಂದು ಪ್ರಕಟಣೆ ಹೇಳಿದೆ.