HEALTH TIPS

ರೈಲ್ವೆ ಹಳಿ ಮೇಲೆ ಮೂವರು ಮಹಿಳೆಯರ ಶವ ಪತ್ತೆ: ಆತ್ಮಹತ್ಯೆ ಶಂಕೆ

ತಿರುವನಂತಪುರ: ಕೇರಳದ ಕೊಟ್ಟಾಯಂನ ಸಮೀಪದ ರೈಲ್ವೆ ಹಳಿಯ ಮೇಲೆ ಮೂವರು ಮಹಿಳೆಯರ ಶವ ಇಂದು (ಶುಕ್ರವಾರ) ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ.

ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡಿದ 103 ವರ್ಷದ ವೃದ್ಧೆಪುಣೆ: ನಿಂತಿದ್ದ ಬಸ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಶಿರೂರ್‌ನಲ್ಲಿ ಆರೋಪಿ ಬಂಧನ

ಕೊಟ್ಟಾಯಂ-ನಿಲಂಬೂರ್ ರೈಲು ಎರ್ನಾಕುಲಂ ಕಡೆಗೆ ಚಲಿಸುತ್ತಿದ್ದ ವೇಳೆ ಮೂವರು ಮಹಿಳೆಯರು ರೈಲಿನ ಮುಂದೆ ಹಾರಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತರ ವಯಸ್ಸು, ಗುರುತು ಮತ್ತು ಇತರೆ ವಿವರಗಳು ಇನ್ನೂ ಖಚಿತವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ರೈಲು ಸೇವೆಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೊಟ್ಟಾಯಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries