ನವದೆಹಲಿ: ಐಎಎಸ್ ಅಧಿಕಾರಿ ಮಧು ರಾಣಿ ಟಿಯೋಟಿಯಾ ಅವರನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ನೇತೃತ್ವದಲ್ಲಿ ನಡೆದ ಸೇವಾ ಇಲಾಖೆ ಪುನರ್‌ರಚನೆ ಪ್ರಕ್ರಿಯೆ ನಡೆದಿದೆ.
ಟಿಯೋಟಿಯಾ ಈ ಹಿಂದೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ದೆಹಲಿ ಸರ್ಕಾರ ಹೊರಡಿಸಿದ ವರ್ಗಾವಣೆ ಆದೇಶದಲ್ಲಿ 2011ರ ಬ್ಯಾಚ್‌ನ ಎಜಿಎಂಯುಟಿ ಕೇಡರ್‌ನ ಐಎಎಸ್ ಅಧಿಕಾರಿಗಳಾದ ಸಂದೀಪ್ ಕುಮಾರ್ ಸಿಂಗ್ ಮತ್ತು ರವಿ ಝಾ ಅವರು ಮುಖ್ಯಮಂತ್ರಿಯ ವಿಶೇಷ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.
ದೆಹಲಿ ಜಲ ಮಂಡಳಿಯ (ಆಡಳಿತ) ಹೆಚ್ಚುವರಿ ಜವಾಬ್ದಾರಿಯನ್ನು 2014ರ ಬ್ಯಾಚ್ ಅಧಿಕಾರಿ ಸಚಿನ್ ರಾಣಾ ಅವರಿಗೆ ವಹಿಸಲಾಗಿದೆ.
70 ಸದಸ್ಯ ಬಲ ಹೊಂದಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿದೆ. ಈ ಮೂಲಕ 26 ವರ್ಷದ ಬಳಿಕ ಬಿಜೆಪಿ ಮತ್ತೆ ದೆಹಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.