HEALTH TIPS

ಮಾಡಿರುವ ಕೆಲಸದ ಬಗ್ಗೆ ಸರ್ಕಾರಿ ನೌಕರರು ವಿವರಣೆ ನೀಡಬೇಕು: ಮಸ್ಕ್ ಎಚ್ಚರಿಕೆ

ವಾಷಿಂಗ್ಟನ್‌: ಸರ್ಕಾರಿ ಉದ್ಯೋಗಿಗಳು ವಾರದ ಅವಧಿಯಲ್ಲಿ ಏನೆಲ್ಲ ಕೆಲಸ ಮಾಡಿದ್ದಾರೆ ಎಂಬುದನ್ನು ವಿವರಿಸಬೇಕು. ಇಲ್ಲವಾದರೆ, ಅಂತಹವರಿಂದ ರಾಜೀನಾಮೆ ಪಡೆಯಲಾಗುವುದು ಎಂದು ಉದ್ಯಮಿ ಹಾಗೂ ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆಯ (ಡಿಒಜಿಇ) ಉಸ್ತುವಾರಿ ಎಲಾನ್‌ ಮಸ್ಕ್‌ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸರ್ಕಾರಿ ನೌಕರರು ಕಳೆದ ಒಂದು ವಾರದಲ್ಲಿ ಏನೆಲ್ಲ ಕೆಲಸ ಮಾಡಿದ್ದಾರೆ ಎಂಬುದನ್ನು ವಿವರಿಸಬೇಕು. ಆ ನಿಟ್ಟಿನಲ್ಲಿ ಶೀಘ್ರದಲ್ಲೇ ಅವರಿಗೆಲ್ಲ ಇ-ಮೇಲ್‌ ಕಳುಹಿಸಲಾಗುವುದು. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಮುಂದುವರಿದು, ಒಂದು ವೇಳೆ ಇ-ಮೇಲ್‌ಗೆ ಪ್ರತಿಕ್ರಿಯೆ ನೀಡದಿದ್ದರೆ ಅದನ್ನು ರಾಜೀನಾಮೆ ಎಂದು ಪರಿಗಣಿಸಲಾಗುವುದು ಎಂದೂ ಎಚ್ಚರಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries