ಮೆಂಢರ್/ಜಮ್ಮು: ಜಮ್ಮು- ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಭದ್ರತಾ ಪಡೆಗಳು ಸೋಮವಾರ ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಅನುಮಾನಾಸ್ಪದ ಚಲನವಲನದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ, ಸ್ಥಳೀಯ ಪೊಲೀಸರ ವಿಶೇಷ ಕಾರ್ಯಾಚರಣೆ ಪಡೆ ಹಾಗೂ ಸಿಆರ್‌ಪಿಎಫ್ ಜಂಟಿಯಾಗಿ ಶೋಧ ಆರಂಭಿಸಿವೆ.
ದೇಶದೊಳಗೆ ಅಕ್ರಮವಾಗಿ ನುಸುಳಿ, ದಟ್ಟಡವಿಯಲ್ಲಿ ಅಡಗಿರುವ ಭಯೋತ್ಪಾದಕರನ್ನು ಸದೆಬಡಿಯಲು ಭದ್ರತಾ ಪಡೆಗಳು ಜಮ್ಮುವಿನಾದ್ಯಂತ ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.