ಢಾಕಾ: ಡಿಸೆಂಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಬಾಂಗ್ಲಾದೇಶ ಚುನಾವಣಾ ಆಯೋಗ ಮಂಗಳವಾರ ಹೇಳಿದೆ.
ಚುನಾವಣಾ ಆಯುಕ್ತ ಅಬುಲ್ ಫಜಲ್ ಮೊಹಮ್ಮದ್ ಸನಾವುಲ್ಲಾ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದಾರೆ.
ದೇಶದಲ್ಲಿ ಕಾನೂನು-ಸುವ್ಯವಸ್ಥೆ ಕುಸಿಯುತ್ತಿದೆ. ಆರ್ಥಿಕ ಸ್ಥಿತಿಯೂ ಹದಗೆಟ್ಟಿರುವ ಕಾರಣ, ಡಿಸೆಂಬರ್‌ನಲ್ಲಿ ಚುನಾವಣೆಗಳನ್ನು ನಡೆಸಿ, ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಬೇಕು ಎಂದು ಮಾಜಿ ಪ್ರಧಾನಿ ಖಲೀದಾ ಜಿಯಾ ನೇತೃತ್ವದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷ (ಬಿಎನ್‌ಪಿ) ಪ್ರಸ್ತಾವ ಮಂಡಿಸಿತ್ತು.
ಬಿಎನ್‌ಪಿ ಬೇಡಿಕೆಗೆ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಕೂಡ ಒಪ್ಪಿಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ, ಚುನಾವಣಾ ಆಯೋಗದಿಂದ ಈ ಹೇಳಿಕೆ ಹೊರಬಿದ್ದಿದೆ.