HEALTH TIPS

ವಿಧಾನಸಭೆ ವಿಸರ್ಜನೆಯಾಗಿಲ್ಲ, ತಾತ್ಕಾಲಿಕ ಅಮಾನತಾಗಿದೆಯಷ್ಟೇ: ಸಂಬಿತ್‌ ಪಾತ್ರಾ

ಇಂಫಾಲ್‌: 'ಮಣಿಪುರದಲ್ಲಿ ವಿಧಾನಸಭೆಯ ವಿಸರ್ಜನೆಯಾಗಿಲ್ಲ. ತಾತ್ಕಾಲಿಕವಾಗಿ ಅಮಾನತಿನಲ್ಲಿದೆ. ಸ್ಥಳೀಯ ಪರಿಸ್ಥಿತಿ ಆಧರಿಸಿ ಹೊಸ ಸರ್ಕಾರ ರಚನೆಯ ಸಾಧ್ಯತೆಗಳೂ ಉಳಿದಿವೆ' ಎಂದು ಬಿಜೆಪಿಯ ಈಶಾನ್ಯ ವಲಯದ ಉಸ್ತುವಾರಿ ಸಂಬಿತ್‌ ಪಾತ್ರಾ ತಿಳಿಸಿದ್ದಾರೆ.

ಬಿಜೆಪಿಯು ಮಣಿಪುರದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದರು.

ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಸಂಘರ್ಷದಿಂದ ಹಿಂಸಾಚಾರ ಪೀಡಿತ ರಾಜ್ಯವಾಗಿರುವ ಮಣಿಪುರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಯತ್ನವನ್ನು ಪಕ್ಷ ಮುಂದುವರಿಸಲಿದೆ ಅವರು ತಿಳಿಸಿದ್ದಾರೆ.

ಸುಮಾರು 21 ತಿಂಗಳ ಜನಾಂಗೀಯ ಹಿಂಸಾಚಾರದಿಂದ ರಾಜ್ಯದಲ್ಲಿ 250ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಮುಖ್ಯಮಂತ್ರಿ ಮತ್ತು ಸರ್ಕಾರದ ಕಾರ್ಯವೈಖರಿ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ಕಾರಣ, ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ಎನ್‌. ಬಿರೇನ್‌ ಸಿಂಗ್‌ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಬಿಜೆಪಿಗೆ ಕಷ್ಟವಾಯಿತು. ಇದರ ಬೆನ್ನಲ್ಲೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ.

ಮಣಿಪುರ ವಿಧಾನಸಭೆಯ ಅವಧಿ 2027ರವರೆಗೂ ಇದೆ. ರಾಷ್ಟ್ರಪತಿ ಆಳ್ವಿಕೆ ಜಾರಿಯಾದ ಬೆನ್ನಲ್ಲೇ ರಾಜಧಾನಿ ಇಂಫಾಲ್‌ನಲ್ಲಿರುವ ರಾಜಭವನ, ಮುಖ್ಯಮಂತ್ರಿ ಸಚಿವಾಲಯದ ಸುತ್ತ ಬಿಗಿ ಬಂದೋಬಸ್ತ್‌ ಕಲ್ಪಿಸಲಾಗಿದ್ದು, ಭದ್ರತಾ ಪಡೆಗಳು ಕಟ್ಟೆಚ್ಚರವಹಿಸಿವೆ.

ಹೊಸ ಚುನಾವಣೆಗೆ ಆಗ್ರಹ:

'ರಾಷ್ಟ್ರಪತಿ ಆಳ್ವಿಕೆಯನ್ನು ತಕ್ಷಣವೇ ತೆರವುಗೊಳಿಸಿ, ತ್ವರಿತವಾಗಿ ಹೊಸ ಚುನಾವಣೆ ನಡೆಸಬೇಕು' ಎಂದು ಸಿಪಿಐ (ಎಂ) ಆಗ್ರಹಿಸಿದೆ.

ಇರೋಮ್‌ ಶರ್ಮಿಳಾ ಮಾನವ ಹಕ್ಕುಗಳ ಹೋರಾಟಗಾರ್ತಿರಾಷ್ಟ್ರಪತಿ ಆಳ್ವಿಕೆಯಿಂದ ಪರಿಹಾರ ಸಿಗದು ಶಾಂತಿ ಸ್ಥಾಪನೆಗೆ ಪ್ರಾಮಾಣಿಕ ರಾಜಕೀಯ ಇಚ್ಛಾಶಕ್ತಿ ಅಗತ್ಯವಿದೆ

ಅಮರ್ಥತೆ ಒಪ್ಪಿಕೊಂಡ ಬಿಜೆಪಿ: ರಾಹುಲ್‌

ಟೀಕೆ ನವದೆಹಲಿ (ಪಿಟಿಐ): 'ಮಣಿಪುರದಲ್ಲಿ ಆಡಳಿತ ನಡೆಸಲು ಬಿಜೆಪಿ ಸಂಪೂರ್ಣ ಅಸಮರ್ಥವಾಗಿತ್ತು. ಅದನ್ನೂ ಆ ಪಕ್ಷ ತಡವಾಗಿ ಒಪ್ಪಿಕೊಂಡಿದೆ' ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ. 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಅವರು 'ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದ ನೇರ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.

ಪ್ರಧಾನಿ ಕ್ಷಮೆಗೆ ಆಗ್ರಹ: 'ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಮೂಲಕ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ತಮ್ಮ ವೈಫಲ್ಯವನ್ನು ಒಪ್ಪಿಕೊಂಡಿವೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನರ ಕ್ಷಮೆಯಾಚಿಸಬೇಕು' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. 'ಸಾಂವಿಧಾನಿಕ ಬಿಕ್ಕಟ್ಟು ಎದುರಾದ ಕಾರಣ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ' ಎಂದು ಅವರು 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries