ನವದೆಹಲಿ: ತಪ್ಪುದಾರಿಗೆ ಎಳೆಯುವ ಜಾಹೀರಾತುಗಳ ಕುರಿತು ದೂರು ಸಲ್ಲಿಸಲು ನಾಗರಿಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.
ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, 'ಡ್ರಗ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆ- 1954 ಅತ್ಯಂತ ಮಹತ್ವದ್ದಾಗಿದ್ದು, ಅದರ ನಿಬಂಧನೆಗಳನ್ನು ಅನುಸರಿಸುವುದು ಅತ್ಯಗತ್ಯವಾಗಿದೆ' ಎಂದು ಹೇಳಿದೆ.