ತೆಲಂಗಾಣ: ಕೋರ್ಟ್ ನಲ್ಲಿ ವಾದ ಮಂಡಿಸುತ್ತಿದ್ದಾಗ ಹಿರಿಯ ವಕೀಲರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ತೆಲಂಗಾಣ ಹೈಕೋರ್ಟ್‌ನಲ್ಲಿ ನಡೆದಿದೆ.
ನ್ಯಾಯಾಲಯ ಸಂಖ್ಯೆ 21 ರಲ್ಲಿ ಪ್ರಕರಣವನ್ನು ಮಂಡಿಸುತ್ತಿದ್ದ 60ರ ವಯಸ್ಸಿನ ಪಿ. ವೇಣುಗೋಪಾಲ್ ರಾವ್ ಇದ್ದಕ್ಕಿದ್ದಂತೆ ಕೆಳಗೆ ಬಿದ್ದರು ಮತ್ತು ವಕೀಲರೊಬ್ಬರು ಅವರಿಗೆ CPR ನ್ನು ನಡೆಸಿದರು ಆದರೂ ವಕೀಲರು ಬದುಕಿ ಉಳಿಯಲಿಲ್ಲ ಎಂದು ತೆಲಂಗಾಣ ಹೈಕೋರ್ಟ್ ವಕೀಲರ ಸಂಘದ ಸದಸ್ಯರೊಬ್ಬರು ತಿಳಿಸಿದ್ದಾರೆ.
ಹೈಕೋರ್ಟ್‌ನ ವೈದ್ಯಕೀಯ ತಂಡವು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿತು, ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಹೃದಯಾಘಾತದಿಂದ ವಕೀಲರು ಸಾವನ್ನಪ್ಪಿದ್ದಾರೆ ಎಂದು ಸಂಘದ ಸದಸ್ಯರು ತಿಳಿಸಿದ್ದಾರೆ. ಘಟನೆಯ ನಂತರ ಮಧ್ಯಾಹ್ನ ನ್ಯಾಯಾಲಯದ ವಿಚಾರಣೆಯನ್ನು ಸ್ಥಗಿತಗೊಳಿಸಲಾಯಿತು.