ರೂರ್ಕಿ: ಜಾತಿ ಕಾರಣದಿಂದ ವಿವಾಹಕ್ಕೆ ವಿರೋಧ ವ್ಯಕ್ತವಾದದ್ದರಿಂದ ಬೇಸತ್ತು, ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿರುವ ರಜತ್ ಕುಮಾರ್ (25), ಈ ಹಿಂದೆ ಕಾರು ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ ಅವರ ಜೀವ ಉಳಿಸಿದ್ದರು.
ರಜತ್ ಅವರನ್ನು ಎರಡು ದಿನಗಳಲ್ಲಿ ರಿಷಭ್ ಪಂತ್ ಭೇಟಿ ಮಾಡಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ರಜತ್ ಕುಮಾರ್ ಮತ್ತು ಮನು ಕಶ್ಯಪ್ (21) ಮೂರು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಮನು ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಜತ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.