ಬದಿಯಡ್ಕ: ಇತಿಹಾಸ ಪ್ರಸಿದ್ಧ ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಮಠದ ಮುಂಭಾಗದಲ್ಲಿ ನೃತ್ಯೋತ್ಸವ, ಮಧುವಾಹಿನಿ ಹೊಳೆಯಲ್ಲಿ ತೆಪ್ಪೋತ್ಸವ ಹಾಗೂ ಅವಭೃತ ಸ್ನಾನದೊಂದಿಗೆ ಧ್ವಜಾವರೋಹಣ ಭಾನುವಾರ ನೆರವೇರಿತು. ಶ್ರೀ ಎಡನೀರುಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಿತು.
(ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನ ವಾಷಿಕ ಜಾತ್ರಾಮಹೋತ್ಸವ ಅಂಗವಾಗಿ ಶ್ರೀದೇವರ ಅವಭೃತಸ್ನಾನ ನಡೆಯಿತು.)ಬೆಳಗ್ಗೆಶಯನೋದ್ಘಾಟನೆ, ಮಂಗಳಾಭಿಷೇಕ ತುಳುನಾಡ ಗಾನಗಂಧರ್ವ ಬಿರುದಾಂಕಿತ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಭಕ್ತಿಗಾನ ಮೇಳ ಜರುಗಿತು.