ಚೆನ್ನೈ: ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ತಮಿಳು ಪರ ಕಾರ್ಯಕರ್ತರು ಪೊಲ್ಲಾಚಿ ರೈಲು ನಿಲ್ದಾಣದ ನಾಮಫಲಕದಲ್ಲಿರುವ ಹಿಂದಿ ಅಕ್ಷರಗಳಿಗೆ ಮಸಿ ಬಳಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ತಮಿಳು ಪರ ಕಾರ್ಯಕರ್ತರು ರೈಲು ನಿಲ್ದಾಣದ ನಾಮಫಲಕದಲ್ಲಿ 'ಪೊಲ್ಲಾಚಿ ಜಂಕ್ಷನ್' ಎಂದು ಹಿಂದಿಯಲ್ಲಿ ಬರೆದಿರುವ ಅಕ್ಷರಗಳಿಗೆ ಕಪ್ಪು ಮಸಿ ಬಳಿಯುತ್ತಿರುವುದು ಕಾಣಬಹುದಾಗಿದೆ.
ಏತನ್ಮಧ್ಯೆ, ಘಟನೆ ಬಗ್ಗೆ ಮಾಹಿತಿ ಪಡೆದ ರೈಲ್ವೆ ಅಧಿಕಾರಿಗಳು ತಕ್ಷಣ ಅದನ್ನು ಸರಿಪಡಿಸಿದ್ದಾರೆ.