ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಕಾಕ್‌ಚಿಂಗ್ ಜಿಲ್ಲೆಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂರು ನಿಷೇಧಿತ ಸಂಘಟನೆಗಳಿಗೆ ಸೇರಿದ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಷೇಧಿತ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷದ ನಾಲ್ವರು ಕಾರ್ಯಕರ್ತರನ್ನು ಬುಧವಾರ ಇಂಫಾಲ್ ಪಶ್ಚಿಮ ಜಿಲ್ಲೆಯ ಕಾಮೆಂಗ್ ಸಬಲ್‌ನಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ .
ಬಂಧಿತರು ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಅವರಿಂದ ಐದು ಬಂದೂಕುಗಳು ಮತ್ತು ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಮತ್ತೊಂದು ಕಾರ್ಯಾಚರಣೆಯಲ್ಲಿ ನಿಷೇಧಿತ ಪ್ರೆಪಕ್ ಸಂಘಟನೆಯ ಒಬ್ಬ ಸಕ್ರಿಯ ಸದಸ್ಯನನ್ನು ಇಂಫಾಲ್ ಪಶ್ಚಿಮದ ಸಿಂಗ್‌ಜಮೇಯಿ ಒಕ್ರಮ್ ಲೈಕೈಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ .
ಆರೋಪಿ ತನ್ನ ಸಹಚರರೊಬ್ಬರು ನೀಡಿದ ಒಂದು ಮೊಬೈಲ್ ಫೋನ್ ಬಳಸಿ ಸಿಂಗ್ಜಮೈ ಪ್ರದೇಶದಲ್ಲಿ ಸಾರ್ವಜನಿಕರಿಂದ ಹಣ ಸುಲಿಗೆ ಮಾಡುತ್ತಿದ್ದ ಎಂದು ಅವರು ಹೇಳಿದ್ದಾರೆ.
ಕಾಕ್‌ಚಿಂಗ್ ಜಿಲ್ಲೆಯ ಎರುಂಪಲ್ ಪ್ರದೇಶದಿಂದ ಕಾನೂನುಬಾಹಿರ ಕೆಸಿಪಿ ಸಂಘಟನೆಯ ಒಬ್ಬ ಸದಸ್ಯನನ್ನು ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.