ನವದೆಹಲಿ: ಟಿಬೆಟನ್ ಧರ್ಮಗುರು ದಲೈಲಾಮಾ ಅವರಿಗೆ ಜೀವ ಬೆದರಿಕೆ ಇರುವುದರಿಂದ ಕೇಂದ್ರ ಸರ್ಕಾರವು 'ಜೆಡ್' ಶ್ರೇಣಿಯ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿದೆ.
ಕೇಂದ್ರ ಗೃಹ ಸಚಿವಾಲಯವು, ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ವಿಐಪಿ ವಿಭಾಗಕ್ಕೆ ದಲೈಲಾಮಾ ಅವರ ರಕ್ಷಣೆಯ ಜವಾಬ್ದಾರಿಯನ್ನು ವಹಿಸಿದೆ.
ಸುಮಾರು 30 ಸಿಆರ್‌ಪಿಎಫ್ ಕಮಾಂಡೋಗಳ ತಂಡವು ದಲೈಲಾಮಾ ಅವರನ್ನು ರಕ್ಷಿಸಲು ಪಾಳಿಯಲ್ಲಿ ಕೆಲಸ ಮಾಡುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಲ್ಲದೇ, ಮಣಿಪುರದ ಬಿಜೆಪಿ ನಾಯಕ ಸಂಬಿತ್ ಪಾತ್ರಾ ಅವರಿಗೂ 'ಝೆಡ್' ಶ್ರೇಣಿಯ ಭದ್ರತೆಯನ್ನು ಒದಗಿಸಿದೆ ಎಂದು ಮೂಲಗಳು ತಿಳಿಸಿವೆ.