ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 9ರ ತನಕ ನಡೆಯಲಿರುವುದು. ಪೂರ್ವಭಾವಿಯಾಗಿ ಹಮ್ಮಿಕೊಂಡ ವಾಹನ ಪ್ರಚಾರ ಬುಧವಾರ ಶ್ರೀ ಕ್ಷೇತ್ರದಿಂದ ಆರಂಭಿಸಲಾಯಿತು. ಕ್ಷೇತ್ರದ ಆಡಳಿತ ಮೊಕ್ತೇಸರ ನರಸಿಂಹ ಭಟ್ ಕಾರ್ಮಾರು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಸುಂದರ ಶೆಟ್ಟಿ ಕೊಲ್ಲಂಗಾನ, ಪ್ರಚಾರ ಸಮಿತಿ ಅಧ್ಯಕ್ಷ ಶ್ಯಾಮಪ್ರಸಾದ ಸರಳಿ ಅವರಿಗೆ ಧ್ವಜ ಹಸ್ತಾಂತರಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಪುದುಕೋಳಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕ್ಕುಂಜ, ಉಪಾಧ್ಯಕ್ಷ ಶ್ಯಾಮಪ್ರಸಾದ ಮೇಗಿನಡ್ಕ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ರಾಮ ಕೆ. ಕಾರ್ಮಾರು, ಪ್ರಚಾರ ಸಮಿತಿಯ ಸಂಚಾಲಕ ವಿಜಯಕುಮಾರ್ ಮಾನ್ಯ, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮೈಸೂರಿನಿಂದ ದವಸ ಧಾನ್ಯಗಳು :
ಬ್ರಹ್ಮಕಲಶೋತ್ಸವಕ್ಕಾಗಿ ಮೈಸೂರಿನಲ್ಲಿ ನೆಲೆಸಿರುವ ಜ್ಯೋತಿಷಿ ವೆಂಕಟೇಶ್ವರ ಭಟ್ ಕುಂಜಾರು ಅವರು ಕಳುಹಿಸಿಕೊಟ್ಟ ಒಂದುಲೋಡ್ ದವಸ ಧಾನ್ಯಗಳು ಹಾಗೂ ತರಕಾರಿಗಳನ್ನು ಶ್ರೀಕ್ಷೇತ್ರದಲ್ಲಿ ಭಕ್ತಿಭಾವಗಳೊಂದಿಗೆ ಬರಮಾಡಿಕೊಳ್ಳಲಾಯಿತು.