HEALTH TIPS

ದೆಹಲಿ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಅಮಿತ್ ಶಾ ಭೇಟಿಯಾದ ಜೆ.ಪಿ. ನಡ್ಡಾ

ನವದೆಹಲಿ: ಕಳೆದವಾರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಬಹುಮತ ಸಾಧಿಸಿರುವ ಬಿಜೆಪಿ, ರಾಷ್ಟ್ರ ರಾಜಧಾನಿಯಲ್ಲಿ 26 ವರ್ಷಗಳ ಬಳಿಕ ಸರ್ಕಾರ ರಚನೆಗೆ ಸಜ್ಜಾಗಿದೆ. ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಲುವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭಾನುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ವಿಚಾರವಾಗಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ನಾಯಕರು ಶನಿವಾರವೂ ಸಮಾಲೋಚನೆ ನಡೆಸಿದ್ದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನವಾಗಿತ್ತು. ಫೆಬ್ರುವರಿ 8ರಂದು ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 48 ಕಡೆ ಗೆದ್ದಿದೆ.

ಎಎಪಿ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ವಿರುದ್ಧ ನವದೆಹಲಿ ಕ್ಷೇತ್ರದಲ್ಲಿ 4,089 ಮತಗಳ ಅಂತರದಿಂದ ಜಯ ಸಾಧಿಸಿರುವ ಬಿಜೆಪಿ ನಾಯಕ ಪರ್ವೇಶ್‌ ವರ್ಮಾ ಅವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬಂದಿವೆ.

ಅವರಷ್ಟೇ ಅಲ್ಲದೆ ಸತೀಶ್‌ ಉಪಾಧ್ಯಾಯ, ವಿಜೇಂದರ್‌ ಗುಪ್ತಾ, ಆಶಿಷ್‌ ಸೂದ್ ಮತ್ತು ಪವನ್‌ ಶರ್ಮಾ ಅವರಂತಹ ನಾಯಕರ ಹೆಸರುಗಳೂ ಮುನ್ನಲೆಯಲ್ಲಿವೆ. ಆದರೆ, ಬಿಜೆಪಿಯು ಈ ಹಿಂದೆ ಹೊಸ ಮುಖಗಳಿಗೆ ಮಣೆ ಹಾಕಿದ ಉದಾಹರಣೆಗಳಿವೆ.

2023ರಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ 2024ರಲ್ಲಿ ಒಡಿಶಾದಲ್ಲಿ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಮಧ್ಯಪ್ರದೇಶದಲ್ಲಿ ಮೋಹನ್‌ ಯಾದವ್‌, ರಾಜಸ್ಥಾನದಲ್ಲಿ ಭಜನ್‌ಲಾಲ್‌ ಶರ್ಮಾ ಹಾಗೂ ಒಡಿಶಾದಲ್ಲಿ ಮೋಹನ್‌ ಚರಣ್‌ ಮಾಝಿ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದ್ದು ರಾಜಕೀಯ ವಿಶ್ಲೇಷಕರನ್ನೇ ಅಚ್ಚರಿಗೊಳಿಸಿತ್ತು.

ಹೀಗಾಗಿ, ನೂತನ ಸಿಎಂ ಕುರಿತು ಕುತೂಹಲಗಳು ಗರಿಗೆದರಿವೆ. ಏತನ್ಮಧ್ಯೆ, ಪರ್ವೇಶ್‌ ವರ್ಮಾ ಅವರು ಭಾನುವಾರ ಲೆಫ್ಟೆನೆಂಟ್‌ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಭೇಟಿಯಾಗಿದ್ದರು.

ಪೂರ್ವಾಂಚಲ ಭಾಗದ ಶಾಸಕರು, ಸಿಖ್‌ ಸಮುದಾಯದವರು ಅಥವಾ ಮಹಿಳೆಯನ್ನು ಪರಿಗಣಿಸುವ ಸಾಧ್ಯತೆ ಇದೆ. ರಾಜಕೀಯ ಲೆಕ್ಕಾಚಾರಗಳ ಮೇಲೆ ಈ ತೀರ್ಮಾನ ಕೈಗೊಳ್ಳಬಹುದು ಎಂದು ಬಿಜೆಪಿಯ ನಾಯಕರೊಬ್ಬರು ಹೇಳಿದ್ದಾರೆ.

ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚದೇವ ಅವರು, ಮುಖ್ಯಮಂತ್ರಿ ಕುರಿತು ಪಕ್ಷದ ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ. ಆಯ್ಕೆಯಾಗಿರುವ ಎಲ್ಲ ಶಾಸಕರು, ತಮಗೆ ವಹಿಸುವ ಕರ್ತವ್ಯಗಳನ್ನು ನಿಭಾಯಿಸಲು ಸಮರ್ಥರಿದ್ದಾರೆ ಎಂದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries